ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಾಗೆಗಳು ಸತ್ತಿರೋದು ಬೇರೆ ಕಾರಣಗಳಿಂದ. ಆದರೂ ಅಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಕೇರಳದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರದಿಂದ ರಾಜ್ಯದಲ್ಲಿ ಆತಂಕ ಮನೆ ಮಾಡಿದೆ. ಈ ನಡುವೆ ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅನುಮಾನಾಸ್ಪದವಾಗಿ ಕಾಗೆಗಳು ಸಾವನ್ನಪ್ಪಿದ್ದವು. ಆ ಕಾಗೆಗಳನ್ನು ಪರೀಕ್ಷೆಗೆ ಕಳಿಸಲಾಗಿತ್ತು, ಸದ್ಯ ಅದರ ವರದಿ ಬಂದಿದ್ದು, ಅವುಗಳು ಹಕ್ಕಿಜ್ವರದಿಂದ ಸಾವನ್ನಪ್ಪಿಲ್ಲ. ಅವುಗಳು ಬೇರೆ ಕಾರಣದಿಂದ ಸತ್ತಿವೆ ಎಂದು ಸುಧಾಕರ್ ತಿಳಿಸಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದ್ದು, ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪಶುಸಂಗೋಪನೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಅದರ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಯಾವುದಾದರೂ ಪಕ್ಷಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರೆ ಯಾರೂ ಕೈಯಿಂದ ಮುಟ್ಟಬೇಡಿ. ಕೋಳಿ ಮೊಟ್ಟೆ, ಮಾಂಸ ತಿನ್ನುವವರು ಫುಲ್ ಬೇಯಿಸಿ ತಿನ್ನಿ, ಅರ್ಧ ಬೆಂದಿರೋದನ್ನ ತಿನ್ನಬೇಡಿ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಸಂಕ್ರಾಂತಿ ಹಬ್ಬದ ಬಗ್ಗೆ ಮಾತನಾಡಿದ ಸುಧಾಕರ್, ಹಬ್ಬಕ್ಕೆ ಯಾವುದೇ ವಿಶೇಷ ಮಾರ್ಗಸೂಚಿ ಇಲ್ಲ. ಸದ್ಯ ಇರೋದನ್ನೇ ಪಾಲನೆ ಮಾಡಿಕೊಂಡು ಹೋಗಬೇಕು, ಜನ ಜಂಗುಳಿ ಇಲ್ಲದೇ ಸಿಂಪಲ್ ಆಗಿ ಹಬ್ಬ ಆಚರಿಸಿ ಎಂದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post