ಚಿಕ್ಕಬಳ್ಳಾಪುರ: ಜಿಲ್ಲೆಯ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಗುರುವಾರ ಮೃತಪಟ್ಟ ಪಕ್ಷಿಗಳ ಬರ್ಡ್ ಫ್ಲೂ ಸೋಂಕಿನ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಗೆ ಹಕ್ಕಿಜ್ವರದ ಭೀತಿ ಇಲ್ಲ ಎಂದು ಜಿಲ್ಲಾಧಿಕಾರಿ ಲತಾ ಸ್ಙಷ್ಟಪಡಿಸಿದ್ದಾರೆ.
ಸತ್ತ ನಾಲ್ಕೂ ಹಕ್ಕಿಗಳನ್ನು ಬೆಂಗಳೂರಿನಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕಾ ಸಂಶೋಧನಾ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ನಾಲ್ಕೂ ಪಕ್ಷಿಗಳ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಈ ಪರೀಕ್ಷೆಯಲ್ಲಿ ನಾಲ್ಕೂ ಹಕ್ಕಿಗಳಲ್ಲಿ, ಹಕ್ಕಿ ಜ್ವರದ ವರದಿ ನೆಗೆಟಿವ್ ಬಂದಿದೆ. ಇದಲ್ಲದೇ ಕಳೆದ 28 ದಿನಗಳ ಹಿಂದೆ ಅದೇ ಕೆರೆಯಲ್ಲಿ ಮೃತಪಟ್ಟಿದ್ದ ಇತರೆ ಹಕ್ಕಿಗಳನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಅವುಗಳ ವರದಿಯೂ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾರ್ವಜನಿಕರು ಹಕ್ಕಿ ಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈವರೆಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಬಗ್ಗೆ ವರದಿಯಾಗಿಲ್ಲ. ಈಗಾಗಲೇ ಜಿಲ್ಲೆಯಾದ್ಯಂತ ಮುಂಜಾಗ್ರತೆ ವಹಿಸಿಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಅನಾರೋಗ್ಯ ಸ್ಥಿತಿಯಲ್ಲಿ ಅಥವಾ ಮರಣ ಹೊಂದಿದ ಸ್ಥಿತಿಯಲ್ಲಿ ಹಕ್ಕಿಗಳು ಕಂಡು ಬಂದಲ್ಲಿ ಕೂಡಲೇ ಅರಣ್ಯ ಇಲಾಖೆ ಅಥವಾ ಪಶು ವೈದ್ಯಕೀಯ ಇಲಾಖೆಗೆ ಮಾಹಿತಿ ನೀಡಬೇಕು. ಹಕ್ಕಿಜ್ವರ ಎಂಬ ಸುಳ್ಳು ವದಂತಿಯಿಂದಾಗಿ ಯಾವುದೇ ವನ್ಯ ಪ್ರಾಣಿಗಳಿಗೆ, ಹಕ್ಕಿಗಳಿಗೆ ಸಾರ್ವಜನಿಕರು ತೊಂದರೆ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post