ಬೆಂಗಳೂರು: ಇಂದು ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಇರುವುದರಿಂದ ರಾಜಭವನದ ಸುತ್ತಲೂ ಹೈಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 600ಕ್ಕೂ ಅಧಿಕ ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಈಗಾಗಲೇ ಗಣ್ಯರು ರಾಜಭವದತ್ತ ಧಾವಿಸುತ್ತಿದ್ದಾರೆ.
ಅತಿ ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜಭವನದ ಮುಖ್ಯದ್ವಾರದ ಬಳಿ ಬ್ಯಾರಿಕೇಡ್ ಹಾಕಿ ನಿಗದಿತ ವ್ಯಕ್ತಿಗಳನ್ನು, ಪಾಸ್ ಇದ್ದವರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ. ಒಳಗೆ ಬರುವವರು ಸರದಿ ಸಾಲಿನಲ್ಲಿ ನಿಂತು ಒಳ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ. ರಾಜಭವನಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post