ಚಿಕ್ಕಮಗಳೂರು: ಸಿಎಂ ಬಿಎಸ್ಯಡಿಯೂರಪ್ಪಗೆ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ.. ಮೂವರು ಸಚಿವರಾಗುತ್ತಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ ಸಿಡಿನೂ ಇಲ್ಲ, ಪಾಡಿನೂ ಇಲ್ಲ, ಯತ್ನಾಳ್ ಸುಮ್ನೆ ಹೇಳ್ತಾರೆ ಅಷ್ಟೇ ಎಂದಿದ್ದಾರೆ.
ಇದನ್ನೂ ಓದಿ:‘ಬಿಎಸ್ವೈಗೆ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ.. ಮೂವರು ಸಚಿವರಾಗುತ್ತಿದ್ದಾರೆ’ ಯತ್ನಾಳ್ ಆರೋಪ
ನಗರದಲ್ಲಿ ಸುದ್ದಗಾರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ನಿಂದ ಬಂದ ಅರ್ಹತೆ ಇದ್ದವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮುನಿರತ್ನ, ಹೆಚ್.ವಿಶ್ವನಾಥ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಏನೋ ಪದವನ್ನ ಬಳಸಬಹುದು. ಆದರೆ ಇದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದಲ್ಲ. ಎಲ್ಲ ಶಾಸಕರು ಕಲ್ಲುಬಂಡೆಯಂತೆ ಪಕ್ಷದಲ್ಲಿ ಇದ್ದಾರೆ. ಸರ್ಕಾರ ಬಿಲ್ ಕುಲ್ ಪತನವಾಗಲ್ಲ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post