ಕೊಲ್ಕತ್ತಾ: ಕೊಲ್ಕತ್ತಾದ ಬಾಗ್ಬಜಾರ್ ಏರಿಯಾದ ಸ್ಲಮ್ ಒಂದರಲ್ಲಿ ಇದ್ದಕ್ಕಿದ್ದಂತೆ ವ್ಯಾಪಕ ಬೆಂಕಿ ಆವರಿಸಿದ್ದು ಹಲವು ಮನೆಗಳು ಸುಟ್ಟುಕರಕಲಾಗಿವೆ.
ಬೆಂಕಿಯ ಜೊತೆಗೆ ಆಗಾಗ್ಗೆ ಸ್ಫೋಟದ ಸದ್ದು ಸಹ ಕೇಳಿ ಬಂದಿದ್ದು ಮನೆಗಳಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.
ಇನ್ನು ಘಟನೆಯಲ್ಲಿ ಈವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ. ಅಲ್ಲದೇ ಬೆಂಕಿಹೊತ್ತಿಕೊಳ್ಳಲು ಕಾರಣ ಏನೆಂಬುದೂ ತಿಳಿದುಬಂದಿಲ್ಲ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post