ರಾಕಿಂಗ್ ಸ್ಟಾರ್ ಯಶ್ ಬರ್ತಡೇಗೆ ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್ ಆಗಿದ್ದು, ಎಲ್ಲಾ ದಾಖಲೆಗಳನ್ನು ಮುರಿದು ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸ್ತಿದೆ. ಎಲ್ಲಾ ಕಡೆಯಿಂದಲೂ ಟೀಸರ್‌ಗೆ ಪ್ರಶಂಸೆ ಸಿಕ್ಕಿದ್ರೆ. ಆದ್ರೆ ಈ ಮಧ್ಯೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಶ್‌ಗೆ ನೋಟಿಸ್ ಕೊಟ್ಟಿದೆ.
ಟೀಸರ್‌ನಲ್ಲಿ ಯಶ್ ಸಿಗರೇಟ್ ಹಚ್ಚುವ ದೃಶ್ಯವಿದ್ದು, ಇದಕ್ಕೆ ‘ಧೂಮಪಾನ ಆರೋಗ್ಯಕ್ಕೆ ಹಾನಿಕರ’ ಅನ್ನೋ ಸೂಚನೆ ಹಾಕಿರಲಿಲ್ಲ. ಇದು ಧೂಮಪಾನವನ್ನ ಪ್ರಚೋದಿಸುತ್ತದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹೀಗಾಗಿ, ಸಿಗರೇಟ್ ಸೇದುವ ದೃಶ್ಯವನ್ನು ತೆಗೆದು ಹಾಕುವಂತೆ ಆರೋಗ್ಯ ಇಲಾಖೆ ನಟ ಯಶ್‌ಗೆ ನೋಟಿಸ್ ಕೊಟ್ಟಿದೆ.
Thank you.. 🙏 pic.twitter.com/XpHChGiCVD
— Yash (@TheNameIsYash) January 9, 2021
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post