ಸಿಡ್ನಿಯ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾ ತಂಡದ ಅಭಿಮಾನಿಗಳಿಂದ ಕೆಲ ಭಾರತೀಯ ಆಟಗಾರರು ಜನಾಂಗೀಯ ನಿಂದನೆಗೆ ಒಳಗಾಗಿದ್ದರು. ಇದನ್ನ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್, ತೀವ್ರವಾಗಿ ಖಂಡಿಸಿದ್ದಾರೆ.
3ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರಾದ ಬೂಮ್ರಾ, ಸಿರಾಜ್ರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದಕ್ಕೆ ಪ್ರತಿಕ್ರಿಯಿಸಿರುವ ವಾರ್ನರ್, ಮಹಮ್ಮದ್ ಸಿರಾಜ್ರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಸಿರಾಜ್ ಹಾಗೂ ಟೀಮ್ ಇಂಡಿಯಾಕ್ಕೆ ನಾನು ಕ್ಷಮೆ ಕೇಳುತ್ತೇನೆ. ಪ್ರೇಕ್ಷಕರ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ನಮ್ಮ ದೇಶದ ಜನರಿಂದ ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದು ವಾರ್ನರ್, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಇದೇ ವೇಳೆ ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳೋದಕ್ಕಾಗಿ ಹೋರಾಡಿದ ರೀತಿ ನನಗೆ ಇಷ್ಟವಾಯಿತು ಎಂದಿದ್ದಾರೆ.
View this post on Instagram
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post