ಬೆಂಗಳೂರು: ರಾಜ್ಯದಲ್ಲಿ ಇಂದು 2,823 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 66,442 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 69,265 ಕೊರೊನಾ ಟೆಸ್ಟ್ಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 435 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 9,32,432ಕ್ಕೆ ಏರಿಕೆಯಾಗಿದೆ.
ಇಂದು 973 ಸೋಂಕಿತರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9,12,205ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದಾಗಿ 9 ಮಂದಿ ಸಾವನ್ನಪ್ಪಿದ್ದು ಈವರೆಗೆ ಒಟ್ಟು 12,175 ಮಂದಿ ಸೋಂಕಿನಿಂದ ಸಾವನ್ನಪ್ಪಿದಂತಾಗಿದೆ.
ಸದ್ಯ ರಾಜ್ಯದಲ್ಲಿ 8,033 ಪಾಸಿಟಿವ್ ಕೇಸ್ಗಳಿದ್ದು ಈ ಪೈಕಿ 177 ಸೋಂಕಿತರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್ನಲ್ಲಿ ತಿಳಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post