ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು ಇದೇ ಜನವರಿ 26ರಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಲು ನಿರ್ಧರಿಸಿದ್ದಾರೆ. ಇದೀಗ ಟ್ರ್ಯಾಕ್ಟರ್ ಪರೇಡ್ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.
ದೆಹಲಿಯಲ್ಲಿ ಜನವರಿ 26 ರಂದು ಅಂದ್ರೆ ಗಣರಾಜ್ಯೊತ್ಸವದಂದು ನಡೆಯುವ ಸೇನಾ ಪರೇಡ್ ಸಮಯಕ್ಕೆ ಟ್ರ್ಯಾಕ್ಟರ್ ಪರೇಡ್ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರೈತ ಮುಖಂಡರು ಮನವಿ ಮಾಡಿದ್ದರು. ಇದೀಗ ದೆಹಲಿ ಪೊಲೀಸ್ ಇದಕ್ಕೆ ಅನುಮತಿ ನೀಡಿದ್ದಾರೆ.
ನೆರೆಹೊರೆ ರಾಜ್ಯಗಳಾದ ಹರಿಯಾಣ, ಪಂಜಾಬ್ ಮತ್ತು ಉತ್ತರಪ್ರದೇಶದ ಸಾವಿರಾರು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಲಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಭಾಗವಾಗಿ ಈ ಪರೇಡ್ ನಡೆಸಲು ರೈತರು ನಿರ್ಧರಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post