ಬೆಂಗಳೂರು: ನಾನು ಎಲ್ಲಿಯೂ ಇತ್ತೀಚೆಗೆ ಕಾಂಗ್ರೆಸ್ಗೆ ರಾಜೀನಾಮೆ ನೀಡಿದವರನ್ನ ಮರಳಿ ಪಕ್ಷಕ್ಕೆ ಕರೆದುಕೊಂಡು ಬರುತ್ತೇನೆ ಎಂದು ಹೇಳಿಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ.. ಇಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3-4 ಕ್ಷೇತ್ರಗಳ ಶಾಸಕರು ಕಾಂಗ್ರೆಸ್ನಿಂದ ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ.
ಅಷ್ಟು ಬಿಟ್ಟರೆ ಇತ್ತೀಚಿಗೆ ರಾಜೀನಾಮೆ ನೀಡಿದವರನ್ನು ಮರಳಿ ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ ಎಂದು ನಾನು ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲವೆಂದು ಸ್ಪಷ್ಟಪಡಿಸುತ್ತಿದ್ದೇನೆ ಅಂತಾ ತಿಳಿಸಿದ್ದಾರೆ.
ಇಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3-4 ಕ್ಷೇತ್ರಗಳ ಶಾಸಕರು @INCKarnataka ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ.
ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ.— Ramalinga Reddy (@RLR_BTM) January 24, 2021
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post