ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಇಂದ್ರಜಿತ್ ಲಂಕೇಶ್ಗೆ ಸಿಸಿಬಿ ಸೂಚನೆ ನೀಡಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಸಿಸಿಬಿ ಡಿಸಿಪಿ ಬಸವರಾಜ್ ಅಂಗಡಿಯವರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಂದ್ರಜಿತ್ ಲಂಕೇಶ್ಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಇಂದ್ರಜಿತ್ ಲಂಕೇಶ್ ನಾಳೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಲಿದ್ದು, ಪೊಲೀಸರು ಪ್ರಕರಣದ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ನ್ಯೂಸ್ಫಸ್ಟ್ಗೆ ಇಂದ್ರಜಿತ್ ಲಂಕೇಶ್ ಸ್ಪಷ್ಟನೆ ನೀಡಿದ್ದು, ಡ್ರಗ್ ಪ್ರಕರಣದಲ್ಲಿ ವಿಚಾರಣೆಗೆ ಬನ್ನಿ ಎಂದಿದ್ದಾರೆ. ಏಕೆ ಅಂತಾ ಕಾರಣ ಯಾವುದೂ ಹೇಳಿಲ್ಲ. 11 ಗಂಟೆಗೆ ವಿಚಾರಣೆಗೆ ಹಾಜರಾಗುತ್ತೇನೆ. ಆಮೇಲೆ ಏನು ಅಂತಾ ಮಾತಾಡ್ತೀನಿ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post