ನವದೆಹಲಿ: ಜನವರಿ 26 ರಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಹಾಗೂ ಧಾರ್ಮಿಕ ಮತ್ತು ರೈತ ಸಂಘಟನೆಯ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣವನ್ನ ದಾಖಲಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ.. ಐಪಿಸಿ ಸೆಕ್ಷನ್ 124A (ದೇಶದ್ರೋಹ) ಪ್ರಕರಣವನ್ನ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದೇವೆ ಅಂತಾ ತಿಳಿಸಿದ್ದಾರೆ. ಜೊತೆಗೆ ಕ್ರಿಮಿನಲ್ ಪ್ರಕರಣ, UAPAS ಅಡಿಯಲ್ಲೂ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಅಂತಾ ವರದಿಯಾಗಿದೆ.
ಪ್ರತಿಭಟನೆಯಲ್ಲಿ ಭಾಗಿಯಾದ ಎಲ್ಲಾ ಸಂಘಟನೆ ಹಾಗೂ ಅದರ ನಾಯಕತ್ವ ವಹಿಸಿದ ನೇತಾರರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಜನವರಿ 26ರಂದು ಮಧ್ಯಾಹ್ನ 12.15ರ ಸುಮಾರಿಗೆ ಸುಮಾರು 40 ಟ್ರ್ಯಾಕ್ಟರ್ಗಳು ಹಾಗೂ 150ಕ್ಕೂ ಹೆಚ್ಚು ಬೈಕ್ಗಳು, ಖಾಸಗಿ ವಾಹನಗಳು ಕೆಂಪುಕೋಟೆಗೆ ನುಗ್ಗಿದ್ದವು ಅಂತಾ ಹೇಳಲಾಗುತ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post