ದಾವಣಗೆರೆ: ಈ ಬಾರಿ ವಾಲ್ಮೀಕಿ ರತ್ನ ಪ್ರಶಸ್ತಿಗೆ ನಟ ಕಿಚ್ಚ ಸುದೀಪ್ ಭಾಜನರಾಗಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು.. ಫೆಬ್ರವರಿ 8 ಹಾಗೂ 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು, ವಾಲ್ಮೀಕಿ ರತ್ನ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ಗೆ ನೀಡಲಾಗುತ್ತದೆ. ಈ ಬಾರಿಯ ಜಾತ್ರೆಗೆ ಎರಡರಿಂದ ಮೂರು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದಿದ್ದಾರೆ.
ಇನ್ನು ಈಗಾಗಲೇ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನ ಆಹ್ವಾನಿಸಲಾಗಿದೆ. ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿ ಮತ್ತು ನಿಟ್ಟೂರು ನಾರಾಯಣಗುರು ಪೀಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶ್ರೀ ಶ್ರೀ ರೇಣುಕಾನಂದ ಮಹಾಸ್ವಾಮಿ ಸುದೀಪ್ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post