ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟಿ ಸಂಜನಾ ಗಲ್ರಾನಿ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದರು. ಸದ್ಯ ಆಸ್ಪತ್ರೆಯ ಬೆಡ್ ಮೇಲೆ ಇರುವ ಫೋಟೋ ಹಂಚಿಕೊಂಡಿರುವ ಸಂಜನಾ, ಹಿಂದೆಂದಿಗಿಂತಲೂ ಬಲವಾಗಿ ಕಮ್ಬ್ಯಾಕ್ ಮಾಡಲು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸಂಜನಾ, ಪೇಟಿಂಗ್ ಮಾಡುತ್ತ ಇತ್ತೀಚೆಗೆ ಇನ್ಸ್ಟಾದಲ್ಲಿ ಲೈವ್ ಮಾಡಿ ಮಾತನಾಡಿದ್ದರು. ಈ ವೇಳೆ ನನಗೆ ತುಂಬಾ ಹುಷಾರಿಲ್ಲದ ಕಾರಣ ರೆಸ್ಟ್ ಮಾಡುತ್ತಿದ್ದೇನೆ. ಒಂದು ತಿಂಗಳ ಬಳಿಕ ಎಲ್ಲರ ಎದುರು ಬರುವೆ ಎಂದು ಹೇಳಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post