ಬೆಂಗಳೂರು: 2020-21ರ ಆರ್ಥಿಕ ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ತೈಲದ ಮೇಲಿನ ಸೆಸ್ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಲೂಟಿ ಕೊನೆಯಾಗಬೇಕು, ಮೋದಿ ಲೂಟಿ ಕೊನೆಯಾಗಬೇಕು, ಯಡಿಯೂರಪ್ಪ ಟ್ಯಾಕ್ಸ್ ಕೊನೆಯಾಗಬೇಕು ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜನರ ಲೂಟಿ ಮಾಡ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿದೆ. ಮೋದಿ ಹಾಗೂ ಯಡಿಯೂರಪ್ಪ ಟ್ಯಾಕ್ಸ್ ಮದ್ಯಮವರ್ಗಕ್ಕೆ ಹೊರೆ ಆಗ್ತಿದೆ. ಕೇಂದ್ರ ಹಾಗೂ ಬಿಜೆಪಿ ಸರ್ಕಾರದಿಂದ ₹20 ಲಕ್ಷ ಕೋಟಿ ಲೂಟಿ ನಡೆದಿದೆ. ರಾಜಸ್ಥಾನ ಸರ್ಕಾರ ತೈಲದ ಮೇಲಿನ ಸೆಸ್ ಕಡಿಮೆ ಮಾಡಿದೆ, ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಯಾಕೆ ಕಡಿಮೆ ಮಾಡ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಗರದ ಕುಮಾರಕೃಪಾ ಗೆಸ್ಟ್ ಹೌಸ್ಗೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಸಂಜೆ 5 ಗಂಟೆಯವರೆಗೂ ರಾಜ್ಯ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ವನ್ ಟು ವನ್ ಸಭೆ ನಡೆಸಲಿದ್ದಾರೆ. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಗಳ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post