ದೆಹಲಿ: ನಗರದ ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕ ಗಾಂಧಿ ಭೇಟಿಯಾಗಿರುವ ರಾಜ್ಯ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ.
ಭೇಟಿ ವೇಳೆ ಪ್ರಿಯಾಂಕಾ ಗಾಂಧಿಯವರ ಜೊತೆಗೆ ಉತ್ತರ ಪ್ರದೇಶದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಚಳವಳಿಯ ಕುರಿತಾಗಿ ಚರ್ಚಿಸಿದ್ದೇನೆ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯಿದೆ ವಿರೋಧಿಸಿ ಕರ್ನಾಟಕದಲ್ಲಿ ನಡೆಯುತ್ತಿರುವ ಚಳವಳಿಯ ಕುರಿತಾಗಿ @priyankagandhi ಅವರೊಂದಿಗೆ ಮಾತುಕತೆ ನಡೆಸಿದೆ. pic.twitter.com/RfigvWQyLL
— Siddaramaiah (@siddaramaiah) February 17, 2021
ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಶಾಸಕ ಅಶೋಕ್ ಪಟ್ಟಣ್ ಸಾಥ್ ನೀಡಿದ್ದಾರೆ. ಇಂದು ಸಂಜೆ 4.55 ಕ್ಕೆ ಏರ್ ವಿಸ್ತಾರ (UK 819) ವಿಮಾನದ ಮೂಲಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post