ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗಿದೆ. ಇದರ ಜೊತೆ ದೇಶದ ವಿವಿಧ ರಾಜ್ಯಗಳಲ್ಲೂ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಕಾಶ್ಮೀರಕ್ಕೆ ಆಗಮಿಸುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಶ್ರೀನಗರದ ಏರ್ಪೋರ್ಟ್ನಲ್ಲಿ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ವರದಿ ನೆಗೆಟಿವ್ ಬಂದರೆ ಮಾತ್ರ ಅವರನ್ನ ವಿಮಾನ ನಿಲ್ದಾಣದಿಂದ ಹೊರಗೆ ತೆರಳಲು ಅವಕಾಶ ನೀಡಲಾಗಿದೆ. ವಿದೇಶಗಳಿಂದ ಬರುವವರಿಗೂ ಕೊರೊನಾ ಪರೀಕ್ಷೆ ಮಾಡಿ ನಂತರ ರಾಜ್ಯಕ್ಕೆ ಎಂಟ್ರಿ ಮಾಡಿಸಿಕೊಳ್ಳಲಾಗ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post