ಮುಂಬೈ: ಜನರು ಕೊರೊನಾ ನಿಯಮ ಪಾಲಿಸದೇ ಇದ್ದರೆ ಕಠಿಣ ಲಾಕ್ಡೌನ್ ಘೋಷಣೆ ಮಾಡೋದಾಗಿ ಸಿಎಂ ಉದ್ಧವ್ ಠಾಕ್ರೆ ಘೋಷಣೆ ಮಾಡಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋದರೆ 8-15 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡೋದಾಗಿ ತಿಳಿಸಿದ್ದಾರೆ ಅಂತಾ ವರದಿಯಾಗಿದೆ.
ಜನರು ಇಂದಿನಿಂದ ಕೊರೊನಾ ನಿಯಮವನ್ನ ಚಾಚೂ ತಪ್ಪದೇ ಪಾಲಿಸಬೇಕು. ಇಲ್ಲದಿದ್ರೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಲಾಗುತ್ತದೆ. ಹಾಗಂತ ಲಾಕ್ಡೌನ್ ಏಕಾಏಕಿ ತೆಗೆದುಕೊಳ್ಳುವ ನಿರ್ಧಾರವಲ್ಲ. ಯಾವುದೇ ಅಭಿವೃದ್ಧಿ ಕಾರ್ಯವನ್ನೂ ಸ್ಥಗಿತಗೊಳಿಸುತ್ತಿಲ್ಲ. ಎಲ್ಲೆಲ್ಲಿ ಅಗತ್ಯ ಇದೆಯೋ ಅಲ್ಲೆಲ್ಲಾ ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದೆ ಎಂದಿದ್ದಾರೆ.
ಇನ್ನು ಅಮರಾವತಿ, ಅಚಲ್ಪುರ್, ಅಮರಾವತಿ, ಅಕೋಲ, ಬುಲ್ಧಾನ, ವಾಷಿಮ್, ಯುವತ್ಮಾಲ್ ಪಟ್ಟಣಗಳಲ್ಲಿ ಒಂದು ವಾರದ ಮಟ್ಟಿಗೆ ಲಾಕ್ಡೌನ್ ಘೋಷಣೆಯಾಗಿದೆ. ಅಮರಾವತಿಯಲ್ಲಿ ಇಂದು ಸಾವಿರ ಪ್ರಕರಣಗಳು ದಾಖಲಾಗಿವೆ. 40 ಸಾವಿರ ಪ್ರಕರಣಗಳು ರಾಜ್ಯದಲ್ಲಿ ಸಕ್ರಿಯವಾಗಿವೆ ಅಂತಾ ಸಿಎಂ ತಿಳಿಸಿದ್ದಾರೆ. ಇನ್ನು ಇಂದು ಮಹಾರಾಷ್ಟ್ರದಲ್ಲಿ 6,971 ಹೊಸ ಪ್ರಕರಣಗಳು ಪತ್ತೆಯಾಗಿವೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post