ಬೆಂಗಳೂರು: ವಿಧಾನಪರಿಷತ್ ನೂತನ ಸಭಾಪತಿಯಾಗಿ ಎರಡು ವಾರಗಳ ಹಿಂದೆ ಅಧಿಕಾರ ವಹಿಸಿಕೊಂಡಿರುವ ಬಸವರಾಜ್ ಹೊರಟ್ಟಿಗೆ ಸರ್ಕಾರ ಇನ್ನೂ ಸರ್ಕಾರಿ ನಿವಾಸ ಹಂಚಿಕೆ ಮಾಡಿಲ್ಲ ಎನ್ನಲಾಗಿದೆ. ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪಗೆ ಬಸವರಾಜ್ ಹೊರಟ್ಟಿ ಪತ್ರ ಬರೆದು ತಮಗೆ ಸರ್ಕಾರಿ ನಿವಾಸ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಹಿಂದಿನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಗೆ ನೀಡಲಾಗಿದ್ದ ಸರ್ಕಾರಿ ನಿವಾಸವನ್ನ ಸದ್ಯ ನೂತನ ಸಚಿವ ಸಿ.ಪಿ. ಯೋಗೇಶ್ವರ್ಗೆ ಹಂಚಿಕೆ ಮಾಡಲಾಗಿದೆ. ಇದೀಗ ಅದೇ ನಿವಾಸವನ್ನ ತಮಗೆ ಹಂಚಿಕೆ ಮಾಡಿ ಎಂದು ಪತ್ರದಲ್ಲಿ ಹೊರಟ್ಟಿ ಮನವಿ ಮಾಡಿಕೊಂಡಿದ್ದಾರೆ. ಈವರೆಗೆ ಎರಡು ಬಾರಿ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post