ಕಲಬುರಗಿ: ಬೈಕ್ ಮತ್ತು ಟಂಟಂ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದೇವಾಲ ಬಳಿ ನಡೆದಿದೆ. ರೇವಣಸಿದ್ದಪ್ಪ(36) ಹಾಗೂ ಲಕ್ಷ್ಮಿ(18) ಮೃತ ದುರ್ದೈವಿಗಳು.
ಮೈಯೂರು ಗ್ರಾಮದ ರೇವಣಸಿದ್ದಪ್ಪ ಜೇವರ್ಗಿಯಿಂದ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಎದುರಿಗೆ ಬಂದ ಟಂಟಂಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ರೇವಣಸಿದ್ದಪ್ಪ ಹಾಗೂ ಟಂಟಂನಲ್ಲಿದ್ದ ಸಂಗಾಪು ಗ್ರಾಮದ ಲಕ್ಷ್ಮಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಿಂದ ಹತ್ತು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post