ಮೈಸೂರು: ಪರಿಷತ್ ಸಭಾಪತಿ ಆಯ್ಕೆಯಲ್ಲಾದ ಜೆಡಿಎಸ್-ಬಿಜೆಪಿ ಮೈತ್ರಿ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ವಿಸ್ತರಣೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ತೀವ್ರ ಕುತೂಹಲಮೂಡಿಸಿರುವ ಮೈಸೂರು ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಹುತೇಕ ಖಚಿತವಾಗಿದೆ.
ಮೇಯರ್ ಹುದ್ದೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಬೆಂಬಲ ಪಡೆಯಲು ಶಾಸಕ ಸಾ.ರಾ.ಮಹೇಶ್ ಬೆನ್ನತ್ತಿದೆ. ನಿನ್ನೆ ಸಂಜೆ ಸಾ.ರಾ.ಮಹೇಶ್ ಭೇಟಿ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದ ಮೈಸೂರು ಬಿಜೆಪಿ ಮುಖಂಡರ ನಿಯೋಗ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post