ನಂದ ಕಿಶೋರ್ ನಿರ್ದೇಶಿಸಿ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ವಿವಾದಕ್ಕೀಡಾಗಿದೆ. ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಮಾತುಗಳನ್ನ ಆಡಲಾಗಿದೆ ಎಂದು ಆರೋಪಿಸಿ ಬ್ರಾಹ್ಮಣರ ಮಹಾ ಸಭಾ ಇಂದು ಫಿಲ್ಮ್ ಚೇಂಬರ್ನಲ್ಲಿ ಪ್ರತಿಭಟಿಸುತ್ತಿದೆ.
ಪೊಗರು ಸಿನಿಮಾದ ಪ್ರದರ್ಶನ ನಿಲ್ಲಿಸಬೇಕು. ಇಲ್ಲ ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅವಹೇಳನ ಮಾಡಿರುವ ಏಳು ಸೀನ್ಗಳನ್ನೂ ಕಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಫಿಲ್ಮ್ ಚೇಂಬರ್ನಲ್ಲಿ ಪೊಗರು ಚಿತ್ರತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಧಾರವಾಡ ಹಾಗೂ ಕಲಬುರ್ಗಿಯಲ್ಲಿ ಕೂಡ ಬ್ರಾಹ್ಮಣ ಸಮುದಾಯದಿಂದ ಇದೇ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post