ಬೆಳಗಾವಿ: ಕೆಪಿಎಸ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಲಿಂಗ ಪಾಟೀಲ್ ಮನೆ ಮತ್ತು ಅಂಗಡಿಗಳ ಮೇಲೆ ಪೋಲಿಸರು ದಾಳಿ ನಡೆಸಿದ್ದಾರೆ.
ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಮನೆ ಹಾಗೂ ಸಂಗನಕೇರಿ ಗ್ರಾಮದ ಫರ್ನಿಚರ್ ಅಂಗಡಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆರೋಪಿ ಪ್ರಶ್ನೆಪತ್ರಿಕೆ ಸೋರಿಕೆಯ ಮೂಲಕ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿಗಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಸರ್ಚ್ ವಾರೆಂಟ್ನೊಂದಿಗೆ ದಾಳಿ ಮಾಡಿರುವ ಪೊಲೀಸ್ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post