ಬೆಂಗಳೂರು: ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ 6ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಫೋಟದಿಂದ ಅಲ್ಲ. ಬದಲಾಗಿ ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಯಡಿಯೂರಪ್ಪನವರ ದುರಾಡಳಿತದಿಂದ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಶಿವಮೊಗ್ಗದ ಜಿಲೆಟಿನ್ ಸ್ಫೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಪ್ರಶ್ನಿಸಿದ್ದಾರೆ. ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯ ಮಂತ್ರಿ ಅವರನ್ನು ಒತ್ತಾಯಿಸುವೆ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post