ಗದಗ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಕೃಷಿಕಾಯ್ದೆಗಳನ್ನ ವಿರೋಧಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಲಾಗಿದೆ.
ಕಾಂಗ್ರೆಸ್ ಮುಖಂಡ ಹಾಗೂ ಗದಗ ಶಾಸಕ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ. ಭೂಮರೆಡ್ಡಿ ಸರ್ಕಲ್, ಗಾಂಧಿ ಸರ್ಕಲ್, ಟಾಂಗ್ ಕೂಟ, ಮುಳಗುಂದ ನಾಕಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಬೃಹತ್ ಟ್ರಾಕ್ಟರ್ ರ‌್ಯಾಲಿ ನಡೆಸಲಾಗಿದೆ. ಶಾಸಕ ಎಚ್ಕೆ ಪಾಟೀಲ್ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪೆಟ್ರೋಲ್, ಡಿಸೇಲ್, ಸೇರಿದಂತೆ ಅಗತ್ಯ ವಸ್ತುಗಳನ್ನು ಬೆಲೆ ಏರಿಕೆ ಹಾಗೂ ರೈತ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post