ಬೆಂಗಳೂರು: ಅಂತಿಮ ಯಾತ್ರೆಯ ಮೆರವಣಿಗೆ ವೇಳೆ ಪಟಾಕಿ ಸಿಡಿಸಿದ ಪರಿಣಾಮ ಆಕಸ್ಮಿಕ ಬೆಂಕಿ ತಗುಲಿ ಕಟ್ಟಡವೊಂದು ಹೊತ್ತಿ ಉರಿದಿದೆ.
ವೈಯ್ಯಾಲಿ ಕಾವಲ್ನ ದತ್ತಾತ್ರೇಯ ಸ್ವಾಮಿ ಟೆಂಪಲ್ ಬಳಿಯಿರುವ ಸ್ಕ್ರ್ಯಾಪ್ ಅಂಗಡಿಗೆ ಬೆಂಕಿ ಬಿದ್ದಿದೆ. ಮೂಲಗಳ ಪ್ರಕಾರ ಮೃತವ್ಯಕ್ತಿಯ ಅಂತಿಮ ಯಾತ್ರೆ ನಡೆಯುತ್ತಿತ್ತು. ಈ ವೇಳೆ ಪಟಾಕಿ ಸಿಡಿಸಲಾಗಿದೆ. ಪಟಾಕಿ ಕಿಡಿಯಿಂದ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮೊದಲ ಮಹಡಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಅಲ್ಲಿದ್ದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು. ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post