ಪಶ್ಚಿಮ ಬಂಗಾಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯದಲ್ಲಿ ಹೆಚ್ಚಿನ ಭದ್ರತೆ ನೀಡುವಂತೆ ಆದೇಶಿಸಿದೆ.
ಚುನಾವಣೆಯ ಹಿನ್ನೆಲೆಯಲ್ಲಿ ಮೊನ್ನೆ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಮುಂಜಾಗ್ರತೆ ವಹಿಸುತ್ತಿರುವ ಚುನಾವಣಾ ಆಯೋಗ ಈ ರೀತಿ ಮಹತ್ವದ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಲದ ಡಿಜಿಪಿಗೆ ಚುನಾವಣಾ ಆಯೋಗ ಸೂಚನೆ ಹೊರಡಿಸಿದ್ದು, ಸಿಎಂಗೆ ಹೆಚ್ಚಿನ ಭದ್ರತೆ ನೀಡಬೇಕು, ಮುಂದೆ ಇಂಥಹ ಯಾವುದೇ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ತಿಳಿಸಿದೆ. ಆ ಮೂಲಕ ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುತ್ತಿದೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ, ಆರೋಗ್ಯ ವಿಚಾರಿಸಿದ ಪ. ಬಂಗಾಳ ರಾಜ್ಯಪಾಲ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post