ಚಿಕ್ಕಮಗಳೂರು: ತೂಫಾನ್ ಗಾಡಿಯೊಂದರ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ನುಗ್ಗಿದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುವಾಗ ಗಾಡಿಯ ಬ್ರೇಕ್ ಫೇಲ್ ಆಗಿ, ರಸ್ತೆ ಬದಿಗೆ ನುಗ್ಗಿದೆ. ವಾಹನದಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಪಾಯವಾಗಿಲ್ಲ.
ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post