ದೇಶ: ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಱಲಿ ನಡೆಸಲಿದ್ದಾರೆ.
ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಪಶ್ಚಿಮ ಬಂಗಾಳದಲ್ಲಿಂದು ಮೋದಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದ್ದಾರೆ. ಬಂಗಾಳದ ಖರಗ್ಪುರ್ ಜಿಲ್ಲೆಯಲ್ಲಿ ಅವರಿಂದು ಪ್ರಚಾರ ಮಾಡಲಿದ್ದಾರೆ. ಇನ್ನು ಬಿಜೆಪಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪವನ್ನ ಅಸ್ತ್ರ ಮಾಡಿಕೊಂಡಿದೆ. TMC ಅಂದರೆ ಟೆರರ್, ಮರ್ಡರ್ ಮತ್ತು ಕರಪ್ಷನ್ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ.
ಅಸ್ಸಾಂನಲ್ಲೂ ಮೋದಿ ಇಂದು ಪ್ರಚಾರ ಮಾಡಲಿದ್ದು, ಚಬುವ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ನಿನ್ನೆಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅಸ್ಸಾಂನಲ್ಲೇ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಟೀ ಎಸ್ಟೇಟ್ಗಳಿಗೆ ತೆರಳಿ ಟೀ ಕಟಾವು ಮಾಡೋ ಮೂಲಕ ಮತಬೇಟೆಗೆ ಮುಂದಾಗಿದ್ರು. ಮೋದಿ ಭೇಟಿ ಹೊತ್ತಲ್ಲೇ ಅಸ್ಸಾಂನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗ್ತಿದೆ. ಸ್ವತಃ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post