ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ, ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ರಾಮದುರ್ಗ ತಾಲೂಕಿನ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ಮಂಗಳಾ ಸುರೇಶ್ ಅಂಗಡಿ ಅವರು ಚುನಾವಣೆ ಸ್ಪರ್ಧೆಗೆ ರೆಡಿ ಇರಲಿಲ್ಲ. ನಾವೆಲ್ಲಾ ಒತ್ತಾಯ ಮಾಡಿ ಅವರನ್ನ ಕಣಕ್ಕಿಳಿಸಿದ್ದೇವೆ ಎಂದರು.
ಮಂಗಳಾ ಅಂಗಡಿ ಗೆಲುವು ಸಾಧಿಸುತ್ತಾರೆ. ನೀವೆಲ್ಲಾ ಹೆಚ್ಚಿನ ಮತ ನೀಡಿ ಗೆಲ್ಲಿಸಿ ಎಂದು ಹೇಳಲು ಬಂದಿದ್ದೇನೆ. ಕಾಂಗ್ರೆಸ್ ಯೋಗ್ಯತೆಗೆ ಒಂದು ಸೀಟು ಗೆಲ್ಲಲು ಸಾಧ್ಯವಾಗಿದೆ. ಮಂಗಳಾ ಅಂಗಡಿ ಗೆದ್ದರೆ ಈ ಭಾಗದ ಅಭಿವೃದ್ಧಿಗೆ ಸಹಾಯಕವಾಗುತ್ತದೆ. ಮುಂದಿನ ಎರಡು ವರ್ಷ ಮಂಗಳಾ ಅಂಗಡಿ ಕೇಳುವ ಅಭಿವೃದ್ಧಿ ಕೆಲಸ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು.
ನಾನು ಮತ್ತು ಮೋದಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸ ಮನೆ ಮನೆಗೆ ತಲುಪಿಸಿ. ಮರಾಠಾ ಅಭಿವೃದ್ಧಿ ನಿಗಮಕ್ಕೆ ನಿನ್ನೆ 25 ಕೋಟಿ ಬಿಡುಗಡೆ ಮಾಡಿದ್ದೇನೆ. ನೇಕಾರರ ಅಭಿವೃದ್ಧಿಗೆ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವು ನೀಡಿದ್ದೇನೆ. ಮುಂದಿನ ಎಲ್ಲ ಚುನಾವಣೆಯಲ್ಲಿ ಕಾಂಗ್ರೆಸ್ ಬರೋದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅದರಲ್ಲಿ ಹತ್ತಬೇಡಿ ಎಂದು ಹೇಳಿದ್ರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post