ಹಾಸನ: ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ.. ಸಾರಿಗೆ ನೌಕರರ ಮುಷ್ಕರದಲ್ಲಿ ರಾಜಕೀಯ ಇರಬಾರದು. ಜನಸಾಮಾನ್ಯರಿಗೆ ತೊಂದರೆ ಕೊಟ್ಟು ಮುಷ್ಕರ ಮಾಡುವುದು ಒಳ್ಳೆಯದಲ್ಲ ಎಂದಿದ್ದಾರೆ.
ಸಾರಿಗೆ ನೌಕರರು ಮುಷ್ಕರ ಕೈಬಿಡಬೇಕು. ಸರ್ಕಾರ ಮತ್ತು ನೌಕರರರು ಕೂತು ಸಮಸ್ಯೆಗಳನ್ನ ಬಗೆಹರಿಸಿಕೊಳ್ಳಲಿ. ಈಗಾಗಲೇ ನಾಲ್ಕು ಸಾವಿರ ಕೋಟಿ ನಷ್ಟವಾಗಿದೆ. ಖಾಸಗಿ ವಾಹನಗಳಲ್ಲಿ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಆರ್.ಟಿ.ಓ., ಬ್ರೇಕ್ ಇನ್ಸ್ ಪೆಕ್ಟರ್ ಏನು ಮಾಡುತ್ತಿದ್ದಾರೆ..? ನಾನು ಮುಖ್ಯಮಂತ್ರಿ, ಸಾರಿಗೆ ಸಚಿವರಲ್ಲಿ ಮನವಿ ಮಾಡುತ್ತೇನೆ. ಎಲ್ಲಾ ವಸ್ತುಗಳ ಬೆಲೆ ದುಬಾರಿಯಾಗಿದೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಪರಿಷ್ಕರಿಸಬೇಕು ಎಂದು ರೇವಣ್ಣ ಹೇಳಿಕೆ ನೀಡಿದ್ದಾರೆ.
ಇನ್ನು ಅಕ್ರಮ ಕಲ್ಲು ಗಣಿಗಾರಿಕೆಗೆ ಸರ್ಕಾರ ಬ್ರೇಕ್ ಹಾಕಬೇಕು..ಸರ್ಕಾರಿ ವಕೀಲರು ಸರ್ಕಾರದ ಪರ ಕೆಲ್ಸ ಮಾಡಬೇಕು ಬದಲಾಗಿ ಕಲ್ಲಗಣಿಗಾರಿಕೆ ಮಾಲೀಕರ ಪರ ಕೆಲ್ಸ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಪಕ್ಷಾತೀತವಾಗಿ ಅಕ್ರಮ ಕ್ವಾರಿ ಮಾಲೀಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post