ಬೆಂಗಳೂರು: ಇವತ್ತಿನಿಂದ ಮತ್ತೆ ಸಿನಿಮಾ ಹಾಲ್‌ಗಳಲ್ಲಿ ಶೇಕಡಾ 50ರಷ್ಟು ಸೀಟ್ ಭರ್ತಿಗೆ ಮಾತ್ರ ಅವಕಾಶ ಇರಲಿದೆ. ರಾಜ್ಯದ ಎಂಟು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಮೈಸೂರು, ಕಲಬುರಗಿ, ದ.ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡದಲ್ಲಿ ಈ ನಿಯಮ ಜಾರಿಯಲ್ಲಿರಲಿದೆ.
ಕೊರೊನಾ ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರದ ಏಪ್ರಿಲ್ 2ರಂದು ಮಹತ್ವದ ಆದೇಶವನ್ನ ಹೊರಡಿಸಿತ್ತು. ಇದ್ರಲ್ಲಿ ಥಿಯೇಟರ್ಗಳ ಆಕ್ಯುಪೆನ್ಸಿಯನ್ನ ಶೇ.50ಕ್ಕೆ ಇಳಿಸಿತ್ತು. ಈ ವಿಚಾರವಾಗಿ ಬೇಸರಗೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಏಪ್ರಿಲ್ 7ರವರೆಗೂ ಶೇಕಡಾ 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಬೇಕೆಂದು ಸಿಎಂ ಬಳಿ ಮನವಿ ಮಾಡಿದ್ರು. ಮನವಿ ಪುರಸ್ಕರಿಸಿದ ಸಿಎಂ ನಿನ್ನೆಯವರೆಗೂ ಶೇ.50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ್ರು.
ಇದೀಗ ಇವತ್ತಿನಿಂದ ಈ 8 ಜಿಲ್ಲೆಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಇನ್ನು ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕೊರೊನಾ ನಿಯಮವನ್ನ ಪಾಲಿಸಬೇಕು, ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post