ಬೆಂಗಳೂರು: 6ನೇ ಪೇ ಕಮಿಷನ್ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಸರ್ಕಾರದ ವಿರುದ್ಧ ಸಮರ ಸಾರಿರೋ ಸಾರಿಗೆ ನೌಕರರಿಗೆ ಬಿಎಂಟಿಸಿ ಮತ್ತೊಂದು ಶಾಕ್ ಕೊಟ್ಟಿದೆ.
ತರಬೇತಿ ಸಿಬ್ಬಂದಿ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ BMTC ಸೂಚನೆ ಕೊಟ್ಟಿದ್ದು, ಗೈರಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗತ್ತೆ ಅಂತ ಎಚ್ಚರಿಕೆ ನೀಡಿದೆ. ಟ್ರೈನಿ ಸಿಬ್ಬಂದಿ ತರಬೇತಿ ಅವಧಿಯಲ್ಲಿ ಈ ರೀತಿ ಕಾನೂನು ಬಾಹಿರ ಮುಷ್ಕರಕ್ಕೆ ಬೆಂಬಲ ನೀಡಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುಹಾಜರಿಯಾಗಿ ತರಬೇತಿ ನಿಯೋಜನಾ ಆದೇಶದಲ್ಲಿನ ಷರತ್ತು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಬಿಎಂಟಿಸಿ ಹೇಳಿದೆ. ಇಂದು ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ಕೊಟ್ಟಿದೆ.
ಚಾಲಕ, ಕಂಡಕ್ಟರ್, ಮೆಕ್ಯಾನಿಕ್ಗಳು ಸೇರಿದಂತೆ ಬಿಎಂಟಿಸಿಯಲ್ಲಿರೋ 3000 ಟ್ರೈನಿಗಳಿಗೆ ನೋಟಿಸ್ ನೀಡಲಾಗಿದೆ. ನೌಕರರ ಮುಷ್ಕರಕ್ಕೆ ಸೊಪ್ಪು ಹಾಕದ ಬಿಎಂಟಿಸಿ, ತರಬೇತಿ ಸಿಬ್ಬಂದಿಯನ್ನ ಬಳಸಿಕೊಂಡು ಬಸ್ಗಳನ್ನ ರಸ್ತೆಗೆ ಇಳಿಸೋದಕ್ಕೆ ನಿರ್ಧರಿಸಿದೆ ಅಂತ ಹೇಳಲಾಗುತ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post