ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ರಾಜ್ಯದಲ್ಲಿ 8,779 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 99,978 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,08,757 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 6,570 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 10,40,130 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 2,393 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 9,73,949ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 53,395 ಸಕ್ರಿಯ ಪ್ರಕರಣಗಳಿದ್ದು ಇವರಲ್ಲಿ 357 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸೋಂಕಿನಿಂದಾಗಿ 36 ಮಂದಿ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್ನಲ್ಲಿ ಹೇಳಿದೆ. ಇನ್ನು ಬೆಂಗಳೂರು ನಗರವೊಂದರಲ್ಲೇ 4,422 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post