ಮುಂಬೈ: ಮಹಾರಾಷ್ಟ್ರದಲ್ಲಿ ದಿನೇ-ದಿನೇ ಕೊರೊನಾ ಸೋಂಕಿನ ಆರ್ಭಟ ಹೆಚ್ಚಾಗುತ್ತಲೇ ಇದೆ. ಇನ್ನು ಕೊರೊನಾ ನಿಯಂತ್ರಣಕ್ಕೆ ತರಲು ನೈಟ್ ಕರ್ಫ್ಯೂ ಮತ್ತೆ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಹ ಮಾಡಲಾಗಿದೆ.
ಹೀಗಾಗಿ ಲಾಕ್‌ಡೌನ್ ಭೀತಿಯಿಂದಾಗಿ ಈಗಾಗಲೇ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿಯಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಹತ್ವದ ಆದೇಶ ಹೊರಡಿಸಿದೆ. ಯಾವೊಬ್ಬ ವಲಸೆ ಕಾರ್ಮಿಕರೂ ಕೂಡ ರಾಜ್ಯ ಬಿಟ್ಟು ಹೋಗುವಂತಿಲ್ಲ, ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್, ನೈಟ್ ಕರ್ಫ್ಯೂ ಅಸ್ತ್ರ ಬಳಸಿದ್ದೇವೆ ಹೊರೆತು ಬೇರೆಯ ಉದ್ದೇಶವಿಲ್ಲ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ-ತಮ್ಮ ಊರುಗಳಿಗೆ ತೆರಳುವುದರ ಬಗ್ಗೆ ಆಲೋಚನೆ ಮಾಡಬೇಡಿ ಅಂತ ಮಹಾರಾಷ್ಟ್ರ ಕಾರ್ಮಿಕ ಸಚಿವ ಹಸನ್ ಮುಷ್ರಿಫ್ ಮನವಿ ಮಾಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post