ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ದೇಶಾದ್ಯಂತ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದ್ರಲ್ಲೂ ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್ಗಡ, ಉತ್ತರ ಪ್ರದೇಶ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ ಮತ್ತು ಪಂಜಾಬ್ನಲ್ಲಿ ಸೋಂಕು ವ್ಯಾಪಕವಾಗ್ತಿದೆ.
ಹೀಗಾಗಿ ರಾಜ್ಯ ಸರ್ಕಾರಗಳು ಸೋಂಕು ನಿಯಂತ್ರಿಸಲು ಏನೆಲ್ಲಾ ಕ್ರಮಗಳನ್ನು ಕೈಗೊಂಡಿವೆ, ಇನ್ನೂ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗುತ್ತೆ. ಜೊತೆಗೆ ವ್ಯಾಕ್ಸಿನೇಷನ್ ಪ್ರಕ್ರಿಯೆ ಬಗ್ಗೆಯೂ ಈ ವೇಳೆ ಮಾತನಾಡಲಿದ್ದಾರೆ ಅಂತ ಹೇಳಲಾಗಿದೆ.
ಇಂದು ಸಂಜೆ 6.30ಕ್ಕೆ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ, ಸೇರಿದಂತೆ ಎಲ್ಲ ರಾಜ್ಯದ ಸಿಎಂಗಳು ಹಾಗೂ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post