ಮಹಾರಾಷ್ಟ್ರ: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಳವಾಗುತ್ತಲೇ ಇರುವ ಕಾರಣ ರಾಜ್ಯವನ್ನ ಲಾಕ್ಡೌನ್ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಇಂದು ಸಭೆ ಕರೆದಿರುವ ಠಾಕ್ರೆ, ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಜ್ಞರ ಜೊತೆ ಚರ್ಚಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಲಾಕ್ಡೌನ್ ಮಾಡಬೇಕಾ ಬೇಡ್ವಾ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ಡೌನ್ ಇದೆ. ಆದರೂ ಕೊರೊನಾ ಕೇಸ್ಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
3 ರಾಜ್ಯಗಳಿಗೆ ತಜ್ಞರ ತಂಡ ಭೇಟಿ
ಇನ್ನು ದೇಶದಲ್ಲಿ ಅತಿ ಹೆಚ್ಚು ಕೊರೊನಾ ಕೇಸ್ಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ ಸದ್ಯದ ಪರಿಸ್ಥಿತಿ ಮತ್ತು ವಾಸ್ತವತೆ ಅರಿಯಲು ಕೇಂದ್ರ ಆರೋಗ್ಯ ಇಲಾಖೆಯ ತಜ್ಞರ ತಂಡ ರಾಜ್ಯಪ್ರವಾಸ ಕೈಗೊಂಡಿದೆ. ಕೊರೊನಾ ಸೋಂಕು ಹೆಚ್ಚಾಗಿರುವ ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸ್ಘಡಕ್ಕೆ ಈ ತಂಡ ಭೇಟಿ ನೀಡಲಿದೆ. ಈ ಮೂರು ರಾಜ್ಯಗಳ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, RTPCR ಪರೀಕ್ಷೆ ಮಾಡಲು ಆಗದ ಪರಿಸ್ಥಿತಿ ಮತ್ತು ಲಸಿಕೆ ಕೊರತೆ ಉಂಟಾಗುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿರುವ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆ ತಜ್ಞರ ತಂಡವನ್ನು ಈ ರಾಜ್ಯಗಳಿಗೆ ಕಳಿಸಿಕೊಟ್ಟಿದೆ ಎಂದು ವರದಿಯಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post