ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ಪಕ್ಷೇತರ(ಬಿಜೆಪಿ ಬಂಡಾಯ) ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖೂಬಾ ಅವರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ: ‘ಬಿಜೆಪಿ ವರಿಷ್ಠರಿಗೆ ಪ್ರವೇಶವಿಲ್ಲ’- ಮನವೊಲಿಕೆಗೆ ಮುಂದಾದ ಬಿಜೆಪಿ ನಾಯಕರಿಗೆ ಖೂಬಾ ತಿರುಗೇಟು
ಉಪಚುನಾವಣೆಗೆ ಶರಣು ಸಲಗಾರ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಖೂಬಾ ವಿರೋಧಿಸಿದ್ದರು. ಅಲ್ಲದೆ ಸಲಗಾರ ಅವರ ವಿರುದ್ಧ ಬಂಡಾಯವೆದ್ದು ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಖೂಬಾ ಅವರನ್ನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post