ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸಾಗುತ್ತಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಗೆಲುವಿಗಾಗಿ ಭಾರೀ ಪೈಪೋಟಿ ನಡೆಸಿದ್ದಾರೆ. ಪ್ರತಿಯೊಂದು ಬೂತ್ ಮತ ಎಣಿಕೆಯ ಬಳಿಕವೂ ಎರಡೂ ಪಕ್ಷಗಳ ಸ್ಪರ್ಧಿಗಳ ನಡುವೆ ಪೈಪೋಟಿ ಮುಂದುವರೆದಿದೆ. ಫಲಿತಾಂಶ ಏನಾಗುತ್ತೆ ಎಂಬ ಕುತೂಹಲ ಹಾಗೂ ಲೆಕ್ಕಾಚಾರಗಳು ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ನಡೆಯುತ್ತಿದೆ. ಈ ನಡುವೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಮತ ಎಣಿಕೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿರುವ ಸಿದ್ದರಾಮಯ್ಯ ಅವರು, ಏನಯ್ಯಾ? ಸತೀಶ್.. ಫಲಿತಾಂಶ ನೋಡ್ತಿದ್ರೆ ಟೆನ್ಶನ್ ಕೊಡ್ತಿದ್ಯಾ..? ಹೇಗಿದೆ ಅಲ್ಲಿ..? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿರುವ ಸತೀಸ್ ಜಾರಕಿಹೊಳಿ ಅವರು, ತೊಂದರೆ ಇಲ್ಲ ಸರ್ 30,000 ಮತಗಳ ಲೀಡ್ನಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಡೋಂಟ್ ವರಿ.. ಟೆನ್ಶನ್ ಮಾಡ್ಕೊಬೇಡ, ಗೆಲುವು ನಮ್ದೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಕ್ಷೇತ್ರದ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಸ್ ಜಾರಿ ಹೊಳಿ 3,84,883 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಅವರು 3,80,247 ಮತ ಪಡೆದುಕೊಂಡಿದ್ದಾರೆ. ಆ ಮೂಲಕ ಸತೀಸ್ 4,636 ಮತಗಳೊಂದಿಗೆ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post