ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್ ಕೊರತೆಯೇ ದುರಂತಕ್ಕೆ ಕಾರಣ ಅಂತಾ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಅಭಿಮತ ವ್ಯಕ್ತಪಡಿಸಿದೆ.
ಮೇ 2 ರಂದು ರಾತ್ರಿ 11ರಿಂದ ಮೇ 3ರ ಮಧ್ಯರಾತ್ರಿಯವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಲಭ್ಯವಿರಲಿಲ್ಲ. ಇದೇ ಆಕ್ಸಿಜನ್ ದುರಂತಕ್ಕೆ ಕಾರಣ ಅನ್ನೋ ಅಭಿಪ್ರಾಯವನ್ನ ಸಮಿತಿಯ ಸದಸ್ಯರು ವ್ಯಕ್ತಪಡಿಸಿದ್ದಾರೆ. ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಕ್ಸಿಜನ್ ಸಾಗಿಸಲು ಯಾವುದೇ ತಡೆವೊಡಿಲ್ಲ ಅಂತಾ ಸಮಿತಿ ಅಭಿಪ್ರಾಯಪಟ್ಟಿದೆ.
ಅಲ್ಲದೇ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ ಅಂತಲೂ ಸಮಿತಿ ತಿಳಿಸಿದೆ ಎಂದು ತಿಳಿದುಬಂದಿದೆ. ಆಕ್ಸಿಜನ್ ಕೊರತೆಯಿಂದ ಒಂದೇ ದಿನ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದಕ್ಕೆಲ್ಲಾ ಕಾರಣ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರೇ ಅಂತಾ ಕೆಲವು ರಾಜಕೀಯ ನಾಯಕರು ಆರೋಪಿಸಿದ್ದರು. ಎರಡು ಜಿಲ್ಲಾಡಳಿತದ ಸಮನ್ವಯ, ಸಂವಹನದ ಕೊರತೆಯಿಂದಾಗಿ ಅಮಾಯಕ ಜೀವಗಳು ಬಲಿಯಾಗಿವೆ ಅನ್ನೋ ಮಾತುಗಳು ಕೇಳಿಬಂದಿದ್ದವು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post