ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಗುಡ್ನ್ಯೂಸ್ ನೀಡಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಬಾರ್ಗಳನ್ನ ತೆರೆಯಲು ಅನುಮತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಜಿಲ್ಲೆಗಳಿಗೆ ವಿಧಿಸಿದ್ದ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಿದೆ. ಅದರ ಜೊತೆಗೆ ಮದ್ಯದಂಗಡಿಗಳನ್ನ ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅನುಮತಿ ನೀಡಿದೆ. ಇದಕ್ಕೂ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶ ನೀಡಿತ್ತು.
ಇನ್ನು ಪಾರ್ಕ್ಗಳನ್ನ ತೆರೆಯಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೂ ತೆರೆದಿರಲು ಅವಕಾಶ ನೀಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post