ಬೆಂಗಳೂರು: ವೀಕೆಂಡ್ ಲಾಕ್ಡೌನ್ನಲ್ಲಿ ಯಾವುದೇ ಬದಲಾವಣೆ ಇಲ್ಲ, ಎಂದಿನಂತೆ ಮುಂದುವರಿಯುತ್ತದೆ ಅಂತಾ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ನಲ್ಲಿ ಕೆಲವೊಂದಿಷ್ಟು ಸಡಿಲಿಕೆ ಮಾಡಿದೆ. ಆದರೆ ವೀಕೆಂಡ್ ಕರ್ಫ್ಯೂನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಮುಂದುರಿಯಲಿದೆ ಅಂತಾ ಸಿಎಂ ಬಿಎಸ್ವೈ ತಿಳಿಸಿದ್ದಾರೆ.
ಇನ್ನು ದಿನ ನಿತ್ಯದಂತೆ ನೈಟ್ ಕರ್ಫ್ಯೂ ಕೂಡ ರಾಜ್ಯಾದ್ಯಂತ ಮುಂದುವರಿಯಲಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ಕರ್ಫ್ಯೂ ಇರಲಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post