ಚಾಮರಾಜನಗರ: ಡಿಪ್ಲೊಮಾ ಕೋರ್ಸ್ಗಳ ಪರೀಕ್ಷೆ ನಡೆಸುವುದಕ್ಕೆ ಸರ್ಕಾರದ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಭವನದ ಮುಂದೆ ಡಿಪ್ಲೋಮಾ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ ಒಂದೇ ಬಾರಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಕೈ ಬಿಡಬೇಕು.. ವ್ಯಾಕ್ಸಿನೇಷನ್ ಆದ ನಂತರ ಹಾಲಿ ಸೆಮಿಸ್ಟರ್ಗಳ ಪರೀಕ್ಷೆ ನಡೆಸಬೇಕು.. ಪಿಯು ಪರೀಕ್ಷೆ ರದ್ದುಗೊಳಿಸಿದಂತೆ ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಪಡಿಸಬೇಕು.. ಪಿಯುಸಿಯಲ್ಲಿ ಅನುಸರಿಸಿದ ಮಾನದಂಡವನ್ನೇ ಡಿಪ್ಲೋಮಾ ಕೋರ್ಸ್ ಗಳಿಗೂ ಅನುಸರಿಬೇಕು ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post