ನವದೆಹಲಿ: ಭಾರೀ ಮಳೆಯಿಂದ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ದೂರವಾಣಿ ಕರೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪಶ್ಚಿಮ ಬಂಗಾಳದ ವಿವಿಧ ಜಲಾಶಯಗಳು ತುಂಬಿ ಹರಿಯುತ್ತಿವೆ. ರಾಜ್ಯದ ಎಲ್ಲಾ ಜಲಾಶಯಗಳಿಂದ ನೀರು ಹೊರಗೆ ಬಿಟ್ಟಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಜನರನ್ನು ಉಳಿಸಲು ಬೇಕಾದ ಅಗತ್ಯ ನೆರವು ನೀಡುತ್ತೇನೆ ಎಂದು ಸಿಎಂ ಮಮತಾ ಬ್ಯಾನರ್ಜಿಗೆ ಭರವಸೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಸಚಿವರಿಗೆ ಪ್ರಮಾಣ ವಚನ ಸಂಭ್ರಮ; BSY ಬೆರಳಿಗೆ ಮಹಿಳೆ ಸೀರೆ ಪಿನ್ ಚುಚ್ಚಿ ನೋವು
ಇನ್ನು, ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಉದಯ ನಾರಾಯಣಪುರದಲ್ಲಂತೂ ಭಾರೀ ಹಾನಿ ಉಂಟಾಗಿದೆ. ಈಗಾಗಲೇ ಮಮತಾ ಬ್ಯಾನರ್ಜಿ ಇಲ್ಲಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ ಇದರ ಕುರಿತಾದ ವರದಿ ಪ್ರಧಾನಿ ಕಾರ್ಯಾಲಯಕ್ಕೆ ಕಳಿಸಿಕೊಡುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಇದನ್ನೂ ಓದಿ: BigNews: ಸಮುದ್ರಕ್ಕಿಳಿದ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್
ರಾಜ್ಯ ಸರ್ಕಾರ ದಾಮೋದರ್ ವ್ಯಾಲಿ ಕಾರ್ಪೊರೇಷನ್ ಮತ್ತು ದುರ್ಗಾಪುರ ಬ್ಯಾರೇಜ್ನಿಂದ ನೀರು ಹೊರಬಿಟ್ಟ ಕಾರಣ ಆರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕನಿಷ್ಠ 15 ಜನರು ಸಾವನ್ನಪ್ಪಿದ್ದಲ್ಲದೇ, 3 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.
ಇದನ್ನೂ ಓದಿ: ಲೇಟ್ ಆಗಿ ಬಂದಿದ್ದಕ್ಕೆ ಝೀರೋ ಟ್ರಾಫಿಕ್ನಲ್ಲಿ ಬಂದು ಶಶಿಕಲಾ ಜೊಲ್ಲೆ ಪ್ರಮಾಣ ವಚನ..!
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post