ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ರಚನೆ ಮಾಡಿದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಇದೆ. ಗುಂಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆಯುತ್ತಲೇ ಇದೆ. ಬಿ.ಎಸ್ ಯಡಿಯೂರಪ್ಪ ಬದಲಾವಣೆ ಮಾಡಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿದರೂ, ಸಂಪುಟ ರಚನೆಯಾದರೂ ಅತೃಪ್ತಿ ಮಾತ್ರ ಶಮನವಾಗಿಲ್ಲ. ಈ ಎಲ್ಲದ್ದರ ಕುರಿತು ಚರ್ಚಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ ದೆಹಲಿ ಪ್ರವಾಸ ಬೆಳೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದ್ದು, ಬುಧವಾರ ಹೈಕಮಾಂಡ್ ನಾಯಕರ ಭೇಟಿಯಾಗಲಿದ್ದಾರೆ. ಈ ವೇಳೆ ಕೊರೊನಾ ಲಸಿಕೆ ಕೊರತೆ, ಖಾಲಿಯಿರುವ ಖಾತೆಗಳ ಭರ್ತಿ, ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು, ಕೊರೊನಾ ಲಸಿಕೆ ನೆಪದಲ್ಲಿ ನೇರವಾಗಿ ಸಂಪುಟ ರಚನೆಯಿಂದ ಆದ ಗೊಂದಲದ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಚರ್ಚಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಈ ವಿಚಾರದ ಕುರಿತು ಮಾತುಕತೆ ಮಾಡಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಶ್ವೇತಭವನದ ಮುಂದೆ ಅಫ್ಘಾನಿಸ್ತಾನ ಪ್ರಜೆಗಳ ಪ್ರತಿಭಟನೆ; ಸಾವಿರ ಲಾಡೆನ್ ಹುಟ್ಟುತ್ತಾರೆಂಬ ಆತಂಕ
ತಮ್ಮ ಭೇಟಿ ವೇಳೆ ಸಿಎಂ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ವಿಚಾರ, ಜಿಲ್ಲಾ ಉಸ್ತುವಾರಿಗಳ ನೇಮಕ, ಕೊರೊನಾ ಮೂರನೇ ಅಲೆ ಆಂತಕ ಸೇರಿದಂತೆ ಹಲವು ವಿಚಾರಗಳನ್ನು ಹೈಕಮಾಂಡ್ ಗಮನಕ್ಕೆ ತರಲಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post