ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ತಾಲಿಬಾನ್ಗಳ ವಶವಾಗುತ್ತಿದಂತೆ ದೇಶಬಿಟ್ಟು ಹೋಗುವವರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಫೈಟ್ ಹತ್ತಲು ಬಂದವರ ನಡುವೆ ನೂಕುನುಗ್ಗಲು ಸಂಭವಿಸಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ವಿಮಾನ ನಿಲ್ದಾಣದತ್ತ ಹೆಜ್ಜೆ ಹಾಕುತ್ತಿದ್ದು, ಜನರನ್ನು ನಿಯಂತ್ರಿಸುವುದೇ ಅಸಾಧ್ಯವಾಗಿದೆ.
ಈ ನಡುವೆ ಕಾಬೂಲ್ ವಿಮಾನ ನಿಲ್ದಾಣವನ್ನು 6 ಸಾವಿರ ಅಮೆರಿಕನ್ ಟ್ರೂಪ್ ಸೈನಿಕರು ವಶಕ್ಕೆ ಪಡೆದುಕೊಂಡಿದ್ದು, ಬೇರೆ ಬೇರೆ ದೇಶಗಳ ನಿವಾಸಿಗಳನ್ನು ಅಫ್ಘಾನಿಸ್ತಾನದಿಂದ ಲಿಫ್ಟ್ ಮಾಡಲು ನೆರವು ನೀಡುತ್ತಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಜನರು ಗುಂಪು ಗುಂಪುಗಾಗಿ ವಿಮಾನ ಹತ್ತಲು ಹರಸಾಹಸ ಮಾಡುತ್ತಿರುವ ದೃಶ್ಯಗಳು ಕಂಡು ಬಂದಿದೆ. ಜನರನ್ನು ನಿಯಂತ್ರಣ ಮಾಡಲಾಗದೆ ಅಮೆರಿಕ ಪಡೆಗಳು ಗುಂಡು ಹಾರಿಸಿ ಜನರನ್ನು ಚದುರಿಸಲು ಮುಂದಾಗಿದೆ. ಸದ್ಯದ ಮಾಹಿತಿ ಅನ್ವಯ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮೂವರು ಗುಂಡೇಟಿಗೆ ಬಲಿಯಾಗಿದ್ದಾರೆ.
ಎಲ್ಲಾ ಅಮೆರಿಕರನ್ನು ಅಫ್ಘಾನ್ನಿಂದ ಮುಂದಿನ ಮೂರರಿಂದ ನಾಲ್ಕು ದಿನಗಳಿಂದ ಕರೆತರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಭದ್ರತೆಗಾಗಿ 6 ಸಾವಿರ ಸೈನಿಕರನ್ನು ನಿಯೋಜನೆ ಮಾಡಿದ್ದೇವೆ. ಅಮೆರಿಕ ಮಾತ್ರವಲ್ಲದೇ ಭಾರತ ಸೇರಿದಂತೆ ನ್ಯಾಟೋ ದೇಶಗಳು ಕೂಡ ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನ್ನಿಂದ ಕರೆತರಲು ಟ್ರುಪ್ಗಳನ್ನು ಕಳುಹಿಸಿಕೊಡುತ್ತಿವೆ. ಇತ್ತ ದೇಶವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವ ತಾಲಿಬಾನಿಗಳು ಜೈಲಿನಲ್ಲಿ ಬಂಧಿಸಿಡಲಾಗಿದ್ದ ಉಗ್ರರು ಹಾಗೂ ಖೈದಿಗಳನ್ನು ಬಿಡುಗಡೆ ಮಾಡುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post