ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಎಸ್ಟಿ ಸೋಮಶೇಖರ್ ಪ್ರತಿಕ್ರಿಯಿಸಿ.. ಇದು ನಿಶ್ಚಿತವಾಗಿಯೂ ಒಂದು ಷಡ್ಯಂತ್ರ. ಮೊದಲಿನಿಂದಲೂ ನಾನು ಈ ಬಗ್ಗೆ ಹೇಳುತ್ತಿದ್ದೇನೆ ಎಂದರು.
ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು, ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ. ನನಗೆ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಬರೀ ಶಾಸಕನಾಗಿದ್ದೆ ಅಷ್ಟೇ ಎಂದರು.
ಮೈತ್ರಿ ಸರ್ಕಾರ ಯಾಕೆ ಬಿತ್ತು? ನಾವೆಲ್ಲ ಯಾಕೆ ಪಕ್ಷ ಬಿಟ್ಟೆವು? ಇದನ್ನೆಲ್ಲ ತಿಳಿಯಲು ಕುಮಾರಸ್ವಾಮಿ ರಾತ್ರಿ 10 ಗಂಟೆ ಬಳಿಕ ಕಣ್ಣುಮುಚ್ಚಿ ಮಲಗಿ ಯೋಚಸಲಿ. ಕುಮಾರಸ್ವಾಮಿ ಅವರಿಗೆ ಎಲ್ಲವೂ ಗೊತ್ತಿದೆ. ಅದರೂ ಒಮ್ಮೆ ಕಣ್ಣುಮುಚ್ಚಿ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post