ಚಾಮರಾಜನಗರ: ನಿನ್ನೆ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಬೆನ್ನಲ್ಲೇ, ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಹದೇಶ್ವರ ಬೆಟ್ಟದಲ್ಲಿ ಸಹ ಭೂ ಕುಸಿತ ಉಂಟಾಗಿದೆ.
ಮಹದೇಶ್ವರ ಬೆಟ್ಟದಿಂದ ಪಾಲಾರ್ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುವ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದ್ದು ಅಂತರಾಜ್ಯ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಕಳೆದ ಒಂದು ವಾರದಿಂದಲೂ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಅಲ್ಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಭೂಮಿ ಕುಸಿದಿದೆ. 2019 ರಲ್ಲೂ ಮಳೆಯಿಂದ ಸುಮಾರು 10 ಕಡೆ ಭೂ ಕುಸಿತ ಉಂಟಾಗಿತ್ತು ಎನ್ನಲಾಗಿದೆ. ಇನ್ನು ಈ ವೇಳೆ ಬೆಟ್ಟದ ತಿರುವಿನಲ್ಲಿ ಭತ್ತದ ಯಂತ್ರ ಪಲ್ಟಿ ಹೊಡೆದಿದೆ. ಸದ್ಯ ಜೆಸಿಬಿಯಿಂದ ಮಣ್ಣು, ಕಲ್ಲು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post