ಬೆಳಗಾವಿ: ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿಯನ್ನ ಅರಗಿಸಿಕೊಳ್ಳಲಾಗದೇ ಅಪ್ಪಟ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ಪಟ್ಟಣದ ವಡ್ಡರಗಲ್ಲಿಯಲ್ಲಿ ನಡೆದಿದೆ.
22 ವರ್ಷದ ರಾಹುಲ್ ಗಾಡಿವಡ್ಡರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಂಜೆ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ. ರಾಹುಲ್ ಗೆಳೆಯರೊಟ್ಟಿಗೆ ಸೇರಿ ಶ್ರದ್ಧಾಂಜಲಿ ಸಲ್ಲಿಸಿದ್ದ.
ನಂತರ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಬೆಳಗ್ಗೆ ಹಠಾತ್ ಹೃದಯಾಘಾತದಿಂದ ಪುನೀತ್ ರಾಜ್‍ಕುಮಾರ್ ಸಾವನ್ನಪ್ಪಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post