ಬೆಂಗಳೂರು: ಎಲ್ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ನವೆಂಬರ್ 8ರಿಂದ ಭೌತಿಕ ತರಗತಿ ಆರಂಭಕ್ಕೆ ಅವಕಾಶ ನೀಡಿದೆ.
ಇದೇ ವೇಳೆ ಎಲ್ಕೆಜಿ ಹಾಗೂ ಯುಕೆಜಿ ತರಗತಿ ಆರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಎಲ್ಕೆಜಿ ಹಾಗೂ ಯುಕೆಜಿ ಕೇಂದ್ರವನ್ನ ಮೊದಲು ಸ್ವಚ್ಛಗೊಳಿಸಬೇಕು.
ರಾಸಾಯನಿಕ ದ್ರಾವಣ ಸಿಂಪಡಿಸಿ ಕೇಂದ್ರಗಳನ್ನು ಸಿದ್ಧಪಡಿಸಬೇಕು. ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳು ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ, ಅಲ್ಲದೇ ಮಕ್ಕಳ ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.. ಕೋವಿಡ್ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭ ಮಾಡಲು ಅವಕಾಶ ನೀಡಲಾಗಿದೆ. ಬೆಳಗ್ಗೆ
9:39 ರಿಂದ 3:39 ಗಂಟೆವರೆಗೆ ತರಗತಿ ನಡೆಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಲಕ್ಷಣ ಇರುವ ಮಕ್ಕಳಿಗೆ ತರಗತಿಗೆ ಪ್ರವೇಶ ಇಲ್ಲ ಸೂಚಿಸಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post